Breaking News

ಮಾಜಿ ಸಿಎಂಗೆ ಜೀವ ಬೆದರಿಕೆ ಪತ್ರ : ಸರ್ಕಾರಕ್ಕೆ ಮನವಿ


ಬೆಂಗಳೂರು: ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷಗಳ ಮುಖಂಡರುಗಳಿಗೆ ಬರುತ್ತಿರುವ ಜೀವ ಬೆದರಿಕೆ ಕರೆ ಹಾಗೂ ಪತ್ರಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ ಎಂದರು.

ಕುಂ ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ಧರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ ಎಂದರು.

ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *