ಮಡಿಕೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಳಿಕ ಮುಖ್ಯಮಂತ್ರಿಗಳು ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದ ತೊಂದರೆಗೆ ಒಳಗಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಇತರರು ಉಪಸ್ಥಿತರಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





