Breaking News

ಸೋನಿಯಾ ಗಾಂಧಿಗೆ ಇಡಿ ನೋಟಿಸ್ : ಜು. 21ರಂದು ಪ್ರತಿಭಟನೆ


ಲಂಡನ್‌ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವ ದಿನವಾದ ಜುಲೈ 21ರಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು  ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಗುರುವಾರ ಪಕ್ಷದಿಂದ ಮತ್ತೊಂದು ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಅಲ್ಲಿ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಮತ್ತು ಪಿಸಿಸಿ ಮುಖ್ಯಸ್ಥರು ‘ಭಾರತ್ ಜೋಡೋ ಯಾತ್ರೆ’ ಮತ್ತು ಇತರ ಸಂಘಟನಾ ಕಾರ್ಯಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ಸಭೆಯಲ್ಲಿ, ಉನ್ನತ ನಾಯಕರು ಪ್ರತಿಭಟನಾ ಮೆರವಣಿಗೆ ಮತ್ತು ಇತರ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಕಾಂಗ್ರೆಸ್ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶವನ್ನು ಬಳಸಿಕೊಳ್ಳಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *