ಬೆಂಗಳೂರು: ಮಾಜಿ ಕಾರ್ಪೋರೆಟರ್ ಪತಿ ಅಯೂಬ್ ಖಾನ್ ಅವರು ಚಾಕು ಇರಿತಕ್ಕೆ ಒಳಗಾಗಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಆಯೂಬ್ ಖಾನ್ ಟಿಪ್ಪು ನಗರದ ನಿವಾಸಿಯಾಗಿದ್ದರು. ನಿನ್ನೆ ಅವರಿಗೆ ಚಾಕು ಇರಿಯಲಾಗಿತ್ತು. ಮನೆಯ ಕೂಗಳತೆ ದೂರದಲ್ಲೇ ಸಂಬಂಧಿಕರು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚಾಕು ಇರಿತದಿಂದ ಹೊಟ್ಟೆಯ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದರಿಂದ ಕೂಡಲೇ ಅವರನ್ನ ಬೆನ್ನೇರುಘಟ್ಟದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ಆರೋಪಿಗಳಾದ ಮಥೀನ್ ಖಾನ್ ಹಾಗೂ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





