ಕೊಪ್ಪಳ: ತಾಲ್ಲೂಕಿನ ಹಿರೇಸುಳಿಕೇರಿ ಗ್ರಾಮದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ
ಯಲಬುರ್ಗಾ ತಾಲ್ಲೂಕಿನ ಹುಲ್ಲೇಗುಡ್ಡ ಶರಣಬಸವ ಮತ್ತು ಹನುಮಂತಪ್ಪ ಕಂಬಳಿ ಮೃತರು. ಕಾರು ಚಲಾಯಿಸುತ್ತಿದ್ದ ಶರಣಬಸವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹನುಮಂತಪ್ಪ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





