ಬೆಂಗಳೂರು : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೀಯ ‘ಭಾರತ್ ಜೋಡೋ ಯಾತ್ರೆ’ಯು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 22 ದಿನಗಳ ಕಾಲ ನಡೆಯಲಿದ್ದು, ರಾಜ್ಯದಲ್ಲೇ ಬರೋಬ್ಬರಿ 510 ಕಿ.ಮೀ. ಉದ್ದದವರೆಗೆ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಲ್ನಡಿಗೆ ಮೂಲಕವೇ ಯಾತ್ರೆ ಪೂರೈಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ನಿತ್ಯ ಸರಾಸರಿ 20 ಕಿ.ಮೀ. (ಕೆಲವು ದಿನ 25 ಕಿ.ಮೀ.) ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ದೆಹಲಿಯಲ್ಲಿ ಗುರುವಾರ ನಡೆದ ಭಾರತ್ ಜೋಡೋ ಯಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಬಳಿಕ ರಾಜ್ಯದಲ್ಲಿ ನಡೆಯಲಿರುವ ಯಾತ್ರೆಯ ರೂಪುರೇಷೆಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಎಐಸಿಸಿ ಅಧಿವೇಶನ ನಡೆಸಿದ್ದರು. ಬಳಿಕವೇ ಗಾಂಧೀಜಿ ಅವರು ನಾಯಕತ್ವ ವಹಿಸಿಕೊಂಡರು. ಇದೀಗ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





