ರಾಯಚೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಉತ್ಸವ ವಿಚಾರದ ಕುರಿತು ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರಿಗೆ 75 ವರ್ಷವಾಗಿದೆ. ಸಿದ್ದರಾಮಯ್ಯ ಎಂದೂ ಆಚರಣೆ ಮಾಡಿಕೊಂಡಿರಲಿಲ್ಲ. ಈಗ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಅಮೃತ ಮಹೋತ್ಸವ ಆಚರಿಸಿಕೊಂಡು ಇನ್ನೂ 25 ವರ್ಷ ಚೆನ್ನಾಗಿರಲಿ ಎಂದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರ ಉತ್ಸವವನ್ನೂ ನಾವು ನೋಡುತ್ತಿರುತ್ತೇವೆ. ನಮಗೆ ಲಾಭ-ನಷ್ಟ ಮುಖ್ಯವಲ್ಲ. ಅಧಿಕಾರ ಯಾವತ್ತೂ ಶಾಶ್ವತ ಅಲ್ಲ. ಸಿದ್ದರಾಮಯ್ಯ ಅವರು ಹಿಂದೆ ಬೇರೆಯವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರೆ ಯಾವ ರೀತಿ ಮಾತನಾಡುತ್ತಿದ್ದರು ಎಂಬುದನ್ನು ನೋಡಿಕೊಂಡು ಹೆಜ್ಜೆ ಹಾಕಬೇಕು. ನನಗೆ ಒಂದೆರಡು ಬಾರಿ ಹುಟ್ಟುಹಬ್ಬ ಆಚರಿಸಿಕೊಂಡಾಗ ತಲೆಕಟ್ಟಿದೆಯಾ ನಿನಗೆ ಎಂದು ಹೇಳಿಕೊಂಡೇ ಹೂಗುಚ್ಛ ಕೊಟ್ಟು ಶುಭಾಶಯ ಕೋರಿದ್ದರು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





