ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತಂತೆ ದೇವನಹಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ.
ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ 500 ಕೋಟಿ ರುಪಾಯಿ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಹೊಸ ಸೇತುವೆ ಜಲಾವೃತ, ಸಂಚಾರ ಸ್ಥಗಿತ, 120 ಮಂದಿ ಸ್ಥಳಾಂತರ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕೇಂದ್ರ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





