Breaking News

ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್


ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ.

ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ ದಾಳಿ ನಡೆದಿದೆ. ಪಿಎಸ್‌ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕಾಲಿಗೆ ಗುಂಡು ಹಾರಿಸಲಾಗಿದೆ.
ಸಿಪಿಐ ಅವರು ವಿಜಯ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗಿರೀಶ್ ಕಂಬಾನೂರು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿಜಯ್ ನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಗಿರೀಶ್ ಕೊಲೆ ನಡೆದಿತ್ತು.

ಮಾಹಿತಿ ಮೇರೆಗೆ ಪೊಲೀಸರು ವಿಜಯ್ ನನ್ನು ಬಂಧಿಸಲು ಹೋದಾಗ ಪಿಎಸ್‌ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ್ದು, ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *