ಚೆನ್ನೈ: ಬಹುಭಾಷಾ ನಟ ಪ್ರತಾಪ್ ಪೋಥೆನ್ ಅವರು ಹೃದಯಾಘಾತದಿಂದ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರತಾಪ್ ಪೋಥೆನ್ ಅವರಿಗೆ 70 ವರ್ಷ ವಯಸ್ಸಾಗಿತ್ತು.
ಪೋಥೆನ್ ಅವರು ಪತ್ನಿ ಅಮಲಾ ಮತ್ತು ಮಗಳನ್ನು ಅಗಲಿದ್ದಾರೆ. ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಅನೇಕ ದಿಗ್ಗಜರೊಂದಿಗೆ ಅಭಿನಯಿಸಿದ್ದ ಪೋಥೆನ್, ಹಲವು ಹಿಟ್ ಚಿತ್ರಗಳಿಗೆ ಆಯಕ್ಷನ್ ಕಟ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





