Breaking News

ದೇಶಾದ್ಯಂತ ಕೊರೊನಾ ಸೋಂಕು ಉಲ್ಬಣ


ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 20,044 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 56 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,660 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,40,760 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,301 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,63,651 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 22,93,627 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,71,61,438 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,17,895 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *