ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಜೈಲುಪಾಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಎಡಿಜಿಪಿ ಅಮೃತ್ ಪಾಲ್ 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಜುಲೈ 4ರಂದು ಪಿಎಸ್‌ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಆಗಿದ್ದ ಅಮೃತ್ ಪಾಲ್‌ರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅಂದ್ಹಾಗೆ, ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕೋರ್ಟ್‌ಗೆ ಹಾಜರು ಪಡೆಸಲಾಗಿತ್ತು. ಸಧ್ಯ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾಯಾಲಯ,14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





