ಧಾರವಾಡ : ರಾಸಾಯನಿಕ ಹೊತ್ತ ಟ್ಯಾಂಕರ್ ಉರಳಿದ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ನಡೆದಿದೆ.
ಇದರಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದ್ದು, ಮುಮ್ಮಿಗಟ್ಟಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಈ ಟ್ಯಾಂಕರ್ ಬೆಳಗಿನ ಜಾವ ಮುಮ್ಮಿಗಟ್ಟಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪಲ್ಟಿಯಾಗಿದೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅವನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಗರಗ ಪೋಲೀಸರು ಮುನ್ನಚ್ಚರಿಕ್ಕೆಯ
ಪರಿಣಾಮದಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





