ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸ್ವಿಸ್ ಓಪನ್‌ನಲ್ಲಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಅಮೋಘ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.ಚೀನಾದ ವಾಂಗ್ ಝಿ ಯಿ (Wang Zhi Yi) ವಿರುದ್ದ ನಡೆದ ಫೈನಲ್ ಪಂದ್ಯದಲ್ಲಿ ಭಾರತೀಯ ತಾರೆ ಭರ್ಜರಿ ಪ್ರದರ್ಶನ ನೀಡಿದ್ದರು. ಆರಂಭದಿಂದಲೇ ವಾಂಗ್ ವಿರುದ್ದ ಮೇಲುಗೈ ಸಾಧಿಸಿದ್ದ ಸಿಂಧು, ಮೊದಲ ಸೆಟ್ ಅನ್ನು 21-9 ಅಂತರದಿಂದ ಗೆದ್ದುಕೊಂಡರು. ಇದಾಗ್ಯೂ 2ನೇ ಸೆಟ್ನಲ್ಲಿ ವಾಂಗ್ ಝಿ ಯಿ ಕಂಬ್ಯಾಕ್ ಮಾಡಿದ್ದರು. ದ್ವಿತೀಯ ಸೆಟ್ನ ಆರಂಭದಲ್ಲೇ ಅತ್ಯುತ್ತಮ ಸ್ಮ್ಯಾಶ್ ಮೂಲಕ 6 ಪಾಯಿಂಟ್ ಕಲೆಹಾಕಿ ಒತ್ತಡಕ್ಕೆ ಸಿಲುಕಿಸಿದ್ದರು. ಪರಿಣಾಮ ಎರಡನೇ ಸೆಟ್ ಅನ್ನು ಪಿವಿ ಸಿಂಧು 11-21 ಅಂತರದಿಂದ ಸೋತರು.
bigtvnews | Hubli Dharwad News | Kannada News | Karnataka News Hubli News | News In Hubli | Local news





