Breaking News

ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ : ಡಿಕೆಶಿ


ಬೆಂಗಳೂರು: ದೇಶದಲ್ಲಿ ತನಿಖಾ ಸಂಸ್ಥೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಸಂಸತ್ ಅಧಿವೇಶನವಿದ್ದರೂ ಜು.21 ರಂದು ಇಡಿ ತನಿಖೆಗೆ ಕರೆದಿದ್ದಾರೆ. ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಅವರನ್ನು 50 ಗಂಟೆ ತನಿಖೆ ಮಾಡಿದ್ದರು, ಯಾವುದೇ ಸಾಕ್ಷಿಯನ್ನು ಅಧಿಕಾರಿಗಳು ಕೊಟ್ಟಿಲ್ಲ. ಕೇಳಿದ್ದ ಪ್ರಶ್ನೆಯನ್ನೇ ಕೇಳಿ ಕಿರುಕುಳ ಕೊಟಿದ್ದಾರೆ. ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ನಮ್ಮ ನಾಯಕಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಹಾಗಾಗಿ 21 ರಂದು ಬೃಹತ್ ಪ್ರತಿಭಟನೆ ಮಾಡುತ್ತಿದ್ದೇವೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಶಾಸಕರು, ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಬೇಕು. ಬಂಧನ ಮಾಡಿದರೂ ಚಿಂತೆ ಇಲ್ಲ, ಹೋರಾಟ ಮಾಡಲೇಬೇಕು. ಯಾವುದಕ್ಕೂ ಹೆದರುವ ಪ್ರಶ್ನೆಯಿಲ್ಲ. ನಾವೆಲ್ಲ ಸೇರಿ ಪ್ರತಿಭಟನೆ ಮಾಡಲೇಬೇಕು ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *