ನವದೆಹಲಿ: ದೇಶಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಇಂದು ಸೋಂಕಿತರ ಪತ್ತೆ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,935 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 51 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,760ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,44,264 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16,069 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,97,510 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 4,46,671 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,00,04,61,095 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,61,470 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





