Breaking News

ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ


ನಿನ್ನೆಯಿಂದ ತಗ್ಗಿದ್ದ ವರುಣನ ಅಬ್ಬರ ಇಂದು ಹೆಚ್ಚಾಗುವ ಸಾಧ್ಯತೆಗಳಿವೆ. ಕರಾವಳಿ , ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯ ಹವಾಮಾನ ಇಲಾಖೆ ಇಂದು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆ ಉತ್ತರ ಒಳನಾಡಿನ ಕಲಬರುಗಿ ಮತ್ತು ಬೀದರ್ ನಲ್ಲಿಯೂ ಯೆಲ್ಲೋ ಅಲರ್ಟ್ ಇದೆ.ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಮೈಸೂರು ಭಾಗದಲ್ಲಿ ತುಂತುರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ನಗರದಲ್ಲಿಯೂ ಮಳೆಯ ಸಿಂಚನ ಇರಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *