Breaking News

ನೀರಸಾಗರದ ಜಲಾಶಯದಲ್ಲಿ ಸೆಲ್ಪಿ ಕ್ರೇಜ್‌ಗೆ ಯುವಕ ಬಲಿ . !

ಕಲಘಟಗಿ : ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದ ಬಳಿ ಸೆಲ್ಸಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲಾಗಿರುವ ಘಟನೆ ನಿನ್ನೆ ( ಭಾನುವಾರ ) ನಡೆದಿದೆ .

ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಕಿರಣ ರಜಪೂತ ( 22 ) ನೀರು ಪಾಲಾದ ಯುವಕ . ಇಂದು ಗೆಳೆಯರ ಜೊತೆಗೆ ಪ್ರವಾಸಕ್ಕೆಂದು ಹೋಗಿದ್ದಾಗ ಈ ವೇಳೆ ಸೆಲ್ಸಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದನು . ಏಕಾಏಕಿ ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ .

ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ನೀರಿನಲ್ಲಿ ಕೊಚ್ಚಿ ಹೋದ ಕಿರಣ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ .

ಈ ದುರ್ಘಟನೆಯು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *