ಬೆಂಗಳೂರು: ಗಾಲಿ ಕುರ್ಚಿಯಲ್ಲಿ ಬಂದು ಹಕ್ಕು ಚಲಾಯಿಸಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮತಗಟ್ಟೆ ಬಳಿ ಮುಖಾಮುಖಿಯಾದ ಸಿದ್ದರಾಮಯ್ಯ- ಶ್ರೀನಿವಾಸ ಪ್ರಸಾದ್, ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಕೊರಳಿಗೆ ಕೇಸರಿ ಶಾಲು ಇವು ನೂತನ ರಾಷ್ಟ್ರಪತಿ ಆಯ್ಕೆಗಾಗಿ ವಿಧಾನಸೌಧದಲ್ಲಿ ನಡೆದ ಮತದಾನದ ವೇಳೆ ಕಂಡ ವಿಶೇಷಗಳು. ಬಿಜೆಪಿಯ ಬಹುತೇಕ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಬಂದು ಮತದಾನ ಮಾಡಿದರು.
ರಾಜ್ಯದ 224 ಚುನಾಯಿತ ಶಾಸಕರು ವಿಧಾನಸೌಧದ ಮೊದಲ ಮಹಡಿಯಲ್ಲಿನ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮತ್ತು ರಾಜ್ಯಸಭಾ ಸದಸ್ಯರಾಗಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಲ್ಲಿಯೇ ಮತ ಚಲಾಯಿಸಲು ಅನುಮತಿ ಪಡೆದಿದ್ದರು. ಅವರೂ ತಮ್ಮ ಹಕ್ಕು ಚಲಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





