Breaking News

ನೀಟ್​ ಪರೀಕ್ಷೆಯಲ್ಲೂ ಸದ್ದು ಮಾಡಿದ ಹಿಜಾಬ್

ಶಾಲಾ ಕಾಲೇಜುಗಳಲ್ಲಿ ವಿವಾದ ಸೃಷ್ಟಿಸಿದ್ದ ‘ಹಿಜಾಬ್​’ ಇದೀಗ ನೀಟ್​ ಪರೀಕ್ಷೆಯಲ್ಲೂ ಸದ್ದು ಮಾಡಿದೆ. ನಿನ್ನೆ ನಡೆದ ನೀಟ್​ ಪರೀಕ್ಷೆಯಲ್ಲಿ ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಹಿಜಾಬ್​ ಧರಿಸಿ ಬಂದು ಪೊಲೀಸ್​ ಮತ್ತು ಪರೀಕ್ಷಾ ವೀಕ್ಷಕರ ಜೊತೆ ವಾಗ್ವಾದ ನಡೆಸಿದ್ದಾರೆ. ಕೇರಳದಲ್ಲಿ ಪರೀಕ್ಷೆಗೆ ಹಾಜರಾಗುವ ಮುನ್ನ ನಡೆದ ತಪಾಸಣೆಯಲ್ಲಿ ವಿದ್ಯಾರ್ಥಿನಿಯರಿಗೆ ಒಳಉಡುಪು ತೆಗೆಸಿದ ಗಂಭೀರ ಆರೋಪವೂ ಕೇಳಿಬಂದಿದೆ.

ರಾಜಸ್ಥಾನದ ಕೋಟಾ ಜಿಲ್ಲೆಯ ಮೋದಿ ಕಾಲೇಜಿನಲ್ಲಿ ನಿನ್ನೆ ನಡೆದ ನೀಟ್​ ಪರೀಕ್ಷೆಯ ವೇಳೆ ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದಾರೆ. ಇದನ್ನು ಕಂಡ ಪೊಲೀಸ್​ ಹಿಜಾಬ್ ಕಳಚಿ ಪರೀಕ್ಷೆಗೆ ಹೋಗಲು ಸೂಚಿಸಿದ್ದಾರೆ.ಆದರೆ, ಇದಕ್ಕೆ ಕ್ಯಾತೆ ತೆಗೆದ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಪರೀಕ್ಷೆ ಬರೆಯಲು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಒಪ್ಪದ ಪರೀಕ್ಷಾ ಮೇಲ್ವಿಚಾರಕರು ನಿಯಮದ ಪ್ರಕಾರ ವಿದ್ಯಾರ್ಥಿಗಳು ಕಿವಿಯೋಲೆ, ವಾಚ್​, ತಾಳಿ ಇನ್ನಿತರೆ ಯಾವುದೇ ಹೆಚ್ಚಿನ ಬಟ್ಟೆಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿ ಹೇಳಿದರೂ ಪಟ್ಟು ಬಿಡದೇ ವಿದ್ಯಾರ್ಥಿನಿಯರು ವಾದಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *