ಹಾಸನ: ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ
ಆರೋಪಿಗಳು ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ವೇಳೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದ ಆರೋಪಿಗಳನ್ನ ರಕ್ಷಣೆ ಮಾಡುವಂತೆ ಪ್ರಜ್ವಲ್ ರೇವಣ್ಣ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿರುವ ಮನೇಕಾ ಗಾಂಧಿ, ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





