Breaking News

ಮೋಡ ಕವಿದ ವಾತಾವರಣ : ಸಣ್ಣ ಪ್ರಮಾಣದಲ್ಲಿ ಮಳೆ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯನ ದರ್ಶನ ಆಗಲಿದೆ. ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದಿಂದ ಬೇಸತ್ತಿದ್ದ ಜನರು ಸೂರ್ಯನಿಗೆ ಮೈಯೊಡ್ಡುತ್ತಿದ್ದಾರೆ. ಮಲೆನಾಡಿನ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನ ಜನರಿಗೆ ಬಹಳ ದಿನಗಳ ನಂತರ ನೀಲಿ ಆಗಸ ಕಾಣುವ ಅವಕಾಶ ಸಿಗಲಿದೆ. ಸಂಜೆ ವೇಳೆಗೆ ಮಳೆಯ ಸಿಂಚನ ಉಂಟಾಗುವ ಸಾಧ್ಯತೆಗಳಿವೆ. ಇಂದು ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಎರಡು ವಾರಗಳಿಂದ ನಿರಂತರವಾಗಿ ಮಳೆಯಾದ ಪರಿಣಾಮ ಕೊಂಚ ಚಳಿ ಸಹ ಹೆಚ್ಚಾಗಿದೆ. ಇತ್ತ ಮಳೆ ಬ್ರೇಕ್ ನೀಡಿದ ಬೆನ್ನಲ್ಲೇ ರಾಜ್ಯದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೊಳೆ ರೋಗದ ಆತಂಕದಲ್ಲಿದ್ದ ಕಾಫಿ ಬೆಳೆಗಾರರು ಸಹ ನಿಟ್ಟುಸಿರು ಬಿಟ್ಟಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *