Breaking News

ಬೈಕ್ ಮತ್ತು ಕಾರಿನ ನಡುವೆ ಅಪಘಾತ : ಇಬ್ಬರು ಸಾವು


ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ 11 ವರ್ಷದ ಬಾಲಕ‌ ಸ್ಥಳದಲ್ಲೇ ಮೃತನಾದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅಸುನೀಗಿದ್ದಾರೆ.

ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ (32) ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.‌

ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿದ್ದ ಕಾರು ಹಾಗೂ ಬೆಳವಡಿಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಈ ಬಗ್ಗೆ ಬೆಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *