ಬಾಗಲಕೋಟೆ: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ.
ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮೂರು ಗಂಟೆಗೆ ಘಟನೆ ನಡೆದಿದ್ದು ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಅವರನ್ನು ಬೆಂಗಳೂರು ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದಂತೆ ಚಾಲಕ ಸೇರಿ ನಾಲ್ವರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





