Breaking News

ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ


ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.

ಉಪ್ಪಿನ ಬೆಟಗೇರಿ ಗ್ರಾಮದ ಅಬ್ದುಲ್ ಖಾದರ್ ಮದ್ನಿ (80) ಮೃತ ವ್ಯಕ್ತಿ. ಗ್ರಾಮದ ಹಳ್ಳದಲ್ಲಿ ಅಬ್ದುಲ್ ಮೃತದೇಹ ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥರಾಗಿದ್ದ ಅಬ್ದುಲ್​, ಕಳೆದ ಭಾಬುವಾರ ನಾಪತ್ತೆಯಾಗಿದ್ದರು. ಇಂದು ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *