ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣಕ್ಕಿಳಿದಿದ್ದ ವೇಳೆ ಅವರ ಎದುರಾಳಿಯಾಗಿ ಬಿಜೆಪಿಯಿಂದ ಬಿ. ಶ್ರೀರಾಮುಲು ಸ್ಪರ್ಧಿಸಿದ್ದರು.
ಈ ಚುನಾವಣೆಯಲ್ಲಿ ಶ್ರೀರಾಮುಲು ಪರಾಭವಗೊಂಡಿದ್ದು, ಇದೀಗ ಬೀದರ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 2023ರ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಸೂಚಿಸಿದರೆ ತಾವು ಸಿದ್ದರಾಮಯ್ಯನವರ ಎದುರಾಳಿಯಾಗಿ ಕಣಕ್ಕಿಳಿಯಲು ಸಿದ್ದ ಎಂದು ತಿಳಿಸಿದ್ದಾರೆ.ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯನವರನ್ನು ಗೆಲ್ಲಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ ಎಂದು ಹೇಳಿದ ಶ್ರೀರಾಮುಲು, ಒಂದು ವೇಳೆ ಸಿದ್ದರಾಮಯ್ಯನವರು ಈ ಬಾರಿಯೂ ಬಾದಾಮಿಯಿಂದ ಕಣಕ್ಕಿಳಿದರೆ ಠೇವಣಿ ಕಳೆದುಕೊಳ್ಳುವುದು ಖಚಿತ ಎಂದು ಭವಿಷ್ಯ ನುಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





