Breaking News

ಅಕ್ರಮ ಗಣಿಗಾರಿಕೆಗೆ ಬ್ರೇಕ್‌ಹಾಕಲು ಹೋದ ಡಿಎಸ್ಪಿ ಕಸದ ತೊಟ್ಟಿಯಲ್ಲಿ ಶವವಾಗಿ ಪತ್ತೆ


ಹರ್ಯಾಣ: ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ. ಈ ಘಟನೆಯ ನಂತರ ಆಡಳಿತ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದೆ. ಅದೇ ಸಮಯದಲ್ಲಿ, ಇಡೀ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್‌ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *