Breaking News

ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಹುಬ್ಬಳ್ಳಿ : ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ ಜರುಗಿತು.

ಈ ವೇಳೆ ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧ ಮಾಡಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಅಭಿಯಾನ ನಡೆಸಲಾಗುತ್ತಿದೆ‌.

ಜನರಲ್ಲಿ  ಪ್ಲಾಸ್ಟಿಕ್ ಬಳಕೆ ಬಗ್ಗೆ ಕೆಲವಂದಿಷ್ಟು ಗೊಂದಲಗಳಿದ್ದು, ಕಂಡು ಬಂದಿದೆ. ಅದರಲ್ಲಿ ಮುಖ್ಯವಾಗಿ ಹೊಟೇಲ್    ವ್ಯಾಪಾರಸ್ಥರು ಚಟ್ನಿ, ಸಾಂಬಾರಗಳನ್ನು    ಗ್ರಾಹಕರಿಗೆ   ಯಾವ ರೀತಿಯಾಗಿ ಗ್ರಾಹಕರಿಗೆ ಕೊಡಬೇಕು ಎಂಬ ಪ್ರಶ್ನೆ ಎದುರಾಗುತ್ತಿವೆ. ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಯೋಚಿಸುತ್ತಿದ್ದೇವೆ ಎಂದರು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಂತ್ ಎ ತಿಮ್ಮಯ್ಯ, ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಹು-ಧಾ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ, ವಿರೋಧ ಪಕ್ಷದ ನಾಯಕ ದೊರಾಜ್ ಮನ್ನೆಕುಂಟ್ಲಾ, ಉಪ ಮೇಯರ್ ಉಮಾ ಮುಕುಂದ, ಪಾಲಿಕೆ ಸದಸ್ಯರು, ಅಧಿಕಾರಗಳು, ಸಾರ್ವಜನಿಕರು ಸೇರಿದಂತೆ ಉಪಸ್ಥಿತರಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *