Breaking News

ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಮಹದೇವಪ್ಪ

ಮೈಸೂರು: ‘ಯಾರ‍್ಯಾರೋ ಮುಖ್ಯಮಂತ್ರಿ ಹುದ್ದೆ ಕೇಳುತ್ತಿದ್ದಾರೆ. ಆ ಹುದ್ದೆ ಎಂದರೆ ಎಲ್ಲರಿಗೂ ಹಗುರವಾಗಿ ಹೋಗಿದೆ’ ಎಂದು ವಿಧಾನಸಭೆಯ ವಿರೋಧ ‍ಪಕ್ಷದ ನಾಯಕ ಸಿದ್ದರಾಮಯ್ಯ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಡಾ.ಎಚ್‌.ಸಿ.
ಮಹದೇವಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಆ ಹುದ್ದೆಯ ಗೌರವ ಬೇರೆಯೇ ಇದೆ. ಹೋರಾಟ, ಸಾಮಾಜಿಕ ಬದ್ಧತೆ, ರಾಜಕೀಯ ಜೀವನದ ಅನುಭವ ಎಲ್ಲವೂ ಬೇಕು’ ಎಂದು ಹೇಳಿದರು.

‘ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆಗಳಿದ್ದರೂ ಅದನ್ನು ಹಗುರವಾಗಿ ಯಾರೂ ಕಾಣುತ್ತಿಲ್ಲ. ಬೇರೆ ಪಕ್ಷಗಳಲ್ಲಿ ಆ ಹುದ್ದೆಯ ಬಗ್ಗೆ ಬಹಳ ಹಗುರವಾಗಿ ಮಾತನಾಡಲಾಗುತ್ತಿದೆ. ಎಲ್ಲದಕ್ಕೂ ಮೊದಲು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು 130 ಸೀಟುಗಳನ್ನು ಪಡೆಯಬೇಕು. ನಂತರ ಶಾಸಕರು ಮತ್ತು ಹೈಕಮಾಂಡ್‌ನವರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *