Breaking News

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ


ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮಳೆಯನ್ನು  ಹೊರತುಪಡಿಸಿದ್ರೆ, ಬಹುತೇಕ ಭಾಗಗಳಲ್ಲಿ ಒಣ ಹವೆ ಇರಲಿದೆ. ಬೆಳಗ್ಗೆ 10 ಗಂಟೆಯ ನಂತರ ಬಿಸಿಲು ಏರಿಕೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಇಳಿಕೆಯಾಗಿದೆ. ಆದ್ರೆ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ  ಮಳೆ ಮುಂದುವರಿದಿದೆ. ಇನ್ನೂ ನದಿಗಳ  ಅಬ್ಬರ ತಗ್ಗಿದ್ದು, ಶಾಂತವಾಗಿವೆ. ಮುಳುಗಡೆಯಾಗಿದ್ದ ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗುತ್ತಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದೆ. ಯಾದಗಿರಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾದ್ರೆ, ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *