ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಶೀಘ್ರವೇ ಮಿನಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗುತ್ತಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬಗ್ಗೆ ನ್ಯಾಯಾಲಯಕ್ಕೆ ಆತ್ಮಹತ್ಯೆ ಪ್ರಚೋಜನೆ ಸಂಬಂಧ ಯಾವುದೇ ಸಾಕ್ಷಾಯಾಧಾರಗಳಿಲ್ಲ ಎಂಬುದಾಗಿ ಉಲ್ಲೇಖಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ಅವರಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಸಂಪುಟ ಸೇರೋದಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





