ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗುವುದು. ನೂರಕ್ಕೆ ನೂರು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ” ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





