Breaking News

ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ : ಡಿಕೆಶಿ


ಬೆಂಗಳೂರು: ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ. ಒಡೆದು ಹೋಳಾಗಲು ಕಾಂಗ್ರೆಸ್‌ ಪಕ್ಷ ಕುಂಬಳಕಾಯಿಯೂ ಅಲ್ಲ, ಮಡಿಕೆಯೂ ಅಲ್ಲ. ಬಿಜೆಪಿಯವರು ಏನೇ ಮಾಡಿದರೂ ನಮ್ಮಲ್ಲಿ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದರು.

ಇದೇ ವೇಳೆ, ಬಿಜೆಪಿಯಲ್ಲೇ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ. ಬಿಜೆಪಿ ಸರ್ಕಾರವೇ ಮೈತ್ರಿ ಸರ್ಕಾರ ಎಂಬಂತಾಗಿದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಅನೇಕ ಸಚಿವರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಹೋದವರು. ಆದ್ದರಿಂದ ಅವರಲ್ಲೇ ಆತಂಕ ಮನೆ ಮಾಡಿದೆ. ಹೀಗಾಗಿಯೇ ಅವರ ರಾಷ್ಟ್ರೀಯ ನಾಯಕರು ಪದೇ, ಪದೇ ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *