Breaking News

ನಿನ್ನೆ 1552 ಹೊಸ ಕೊರೋನಾ ಪ್ರಕರಣಗಳು ಪತ್ತೆ


ಬೆಂಗಳೂರು : ರಾಜ್ಯದಲ್ಲಿ ಐದು ತಿಂಗಳ ಬಳಿಕ ಕೊರೋನಾ ಸೋಂಕು ಪ್ರಕರಣಗಳು ಒಂದೂವರೆ ಸಾವಿರದಷ್ಟು ವರದಿಯಾಗಿವೆ. ಇದೇ ವೇಳೆ ಸಕ್ರಿಯ ಸೋಂಕು ಪ್ರಕರಣಗಳು ಎಂಟು ಸಾವಿರ ಗಡಿ ದಾಟಿವೆ. ಗುರುವಾರ 1552 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1384 ಮಂದಿ ಗುಣಮುಖರಾಗಿದ್ದಾರೆ.

ರಾಯಚೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. ಸದ್ಯ 8,033 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.6 ರಷ್ಟು ದಾಖಲಾಗಿದೆ. ಬುಧವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಒಂದೂವರೆ ಸಾವಿರ ಹೆಚ್ಚು ನಡೆದಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *