Breaking News

ಉಡುಪಿಯಲ್ಲಿ ಹೆಚ್ಚಿದ ಕೋವಿಡ್‌ ಪಾಸಿಟಿವ್‌ ಪ್ರಕರಣ


ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಮಾಣ ಒಂದೇ ಸಲಕ್ಕೆ ಹೆಚ್ಚಾಗಿದ್ದು ಗುರುವಾರ 14 ಮಂದಿಗೆ ಸೋಂಕು ದೃಢಪಟ್ಟಿದೆ. 480 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.32 ಪ್ರಕರಣಗಳು ಸಕ್ರಿಯವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್‌ ಪ್ರಕರಣ ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿವೆ. ಶೇ. 1.06 ಪಾಸಿಟಿವಿಟಿ ದರ ದಾಖಲಾಗಿದೆ.

ಲಸಿಕೆ: ಉಡುಪಿಯಲ್ಲಿ 17 ಮಂದಿ ಮೊದಲ ಬಾರಿಗೆ, 21 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 2494 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *