Breaking News

ಜವರಾಯನ ಅಟ್ಟಹಾಸಕ್ಕೆ ಕುಟುಂಬದ ಆಧಾರ ಸ್ಥಂಭ ಗಳು ಬಲಿ


ಕಾರವಾರ: ಉಡುಪಿಯ ಶಿರೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಸಾವನ್ನಪ್ಪಿದ್ದ ದಂಪತಿ ಸೇರಿ ನಾಲ್ವರ ಮೃತದೇಹಗಳನ್ನು ಹೊನ್ನಾವರದ ಹಾಡಗೇರಿಯಲ್ಲಿ  ಅಂತ್ಯ ಸಂಸ್ಕಾರ ನಡೆಸಲಾಯಿತು.

ಆದರೆ, ಜವರಾಯನ ಅಟ್ಟಹಾಸಕ್ಕೆ ದುಡಿದು ತಿನ್ನುವ ಜೀವಗಳು ಬಾರದ ಲೋಕಕ್ಕೆ ತೆರಳಿದ್ದು, ಮೃತ ದಂಪತಿಯ ಮಕ್ಕಳು ಅನಾಥರಾದರೇ, ಮತ್ತಿಬ್ಬರ ಮಕ್ಕಳುಗಳು ತಂದೆಯನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ದೃಶ್ಯಗಳು ನೆರದಿದ್ದವರ ಕಣ್ಣೀರ ಕಡಲಲ್ಲಿ ಮುಳುಗಿಸಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಚೆಕ್ ಪೋಸ್ಟ್ ಬಳಿ ಬುಧವಾರ ನಡೆದ ಭೀಕರ ಆಂಬುಲೆನ್ಸ್ ದುರಂತ ಮೈ ಜುಂ ಎನ್ನಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತೀರುವ ಭೀಕರ ದೃಶ್ಯ ಎಂತವರ ಎದೆಯನ್ನು ಒಮ್ಮೆ ನಡುಗಿಸುವಂತಿದೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಗಜಾನನ ನಾಯಕ ಎಂಬುವವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ನಾಲ್ವರು ಸಾವನ್ನಪ್ಪಿ , ಟೋಲ್ ಸಿಬ್ಬಂದಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ್ದ ರೋಗಿ ಗಜಾನನ ಗಣಪತಿ ನಾಯ್ಕ, ಅವರ ಪತ್ನಿ ಜ್ಯೋತಿ ನಾಯ್ಕ, ಸಂಬಂಧಿಕರಾದ ಮಂಜುನಾಥ ನಾಯ್ಕ ಹಾಗೂ ಲೋಕೇಶ್ ನಾಯ್ಕಇವರ ಮೃತದೇಗಳನ್ನು ಹುಟ್ಟೂರು ಹೊನ್ನಾವರದ ಹಾಡಗೇರಿಗೆ ತಂದು ಗುರುವಾರ ಅಂತ್ಯಕ್ರಿಯೆ ನಡೆಸಲಾಗಿದೆ. ಘಟನೆಯಿಂದಾಗಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಊರಿಗೆ ಊರೇ ಸ್ಮಶಾನ ಮೌನದಂತಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *