ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂಎ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚನ್ನಮ್ಮ ವೃತ್ತದವರೆಗೆ ನಡೆಯಲಿರುವ ಮೆರವಣಿಗೆಗೆ ಚಾಲನೆ ನೀಡಿದರು. ಪಕ್ಷದ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





