Breaking News

ಚರಕ ದೇಶದ ಆಸ್ತಿ, ಗಾಂಧೀಜಿ ದೇಶಕ್ಕೆ ಬಳುವಳಿಯಾಗಿ ಕೊಟ್ಟಿದ್ದಾರೆ : ಡಿಕೆಶಿ

ಹುಬ್ಬಳ್ಳಿ: ಚರಕ ದೇಶದ ಆಸ್ತಿ, ಗಾಂಧೀಜಿ ದೇಶಕ್ಕೆ ಬಳುವಳಿಯಾಗಿ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಷ್ಟ್ರಧ್ವಜವನ್ನು ಪಾಲಿಸ್ಟರ್ ಬಟ್ಟೆಗಳಿಂದ ಮಾಡಬಹುದು ಎಂದು ಅನುಮತಿ ನೀಡಿದೆ. ಇದು ದೇಶಕ್ಕೆ ಅವಮಾನ. ಪ್ರತಿ ಮನೆಯಲ್ಲಿ ರಾಷ್ಟ್ರ ಬಾಹುಟ ಹಾಕುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಧ್ವಜ ತಯಾರಿಕೆ ವಿಷಯದಲ್ಲಿ ಕಾನೂನು ವಿರೋಧಿಸಿ ನಡೆಯುತ್ತಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ರಾಷ್ಟ್ರಧ್ವಜ ತಯಾರಿಕೆ ಕುರಿತಾದ ಆದೇಶವನ್ನು ವಾಪಾಸ್ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರ ಪ್ರತಿ ಮನೆಯಲ್ಲಿ ಖಾದಿ ರಾಷ್ಟ್ರ ಧ್ವಜ ಹಾರಿಸಬೇಕೆಂದು ಹೇಳಿದರೇ ಮೆಕ್ ಇನ್ ಇಂಡಿಯಾ ಅರ್ಥಕ್ಕೆ ಗೌರವ ಬರತ್ತಾ ಇತ್ತು. ಇದೀಗ ಸ್ವದೇಶ ಬಿಟ್ಟು ವಿದೇಶದ ಚಿಂತನೆ ಖಂಡನೀಯ ಎಂದರು.

ಕಾಂಗ್ರೆಸ್ ನಾಯಕ ರಮೇಶ ಕುಮಾರ ಹೇಳಿಕೆಯನ್ನು ನಾನು ಸಮರ್ಥಿಸಿಕೊಳ್ಳುತ್ತೇವೆ. ಅವರು ಸೋನಿಯಾಗಾಂಧಿ ವಿಚಾರವಾಗಿ ತಪ್ಪು ಮಾತಾಡಿಲ್ಲ. ಅವರ ಹೇಳಿಕೆಯನ್ನು ತಿರುಚಲಾಗಿದೆ. ನೆಹರೂ ಕುಟುಂಬದ ತ್ಯಾಗ, ಸಾಧನೆಯನ್ನು ಹೇಳಿದ್ದಾರೆ ಎಂದರು.

75 ನೇ ವರ್ಷದ ಅಮೃತ ಮಹೋತ್ಸವ ಅಂಗವಾಗಿ ಅಗಸ್ಟ್ 15 ರಂದು ರಾಷ್ಟ್ರವ್ಯಾಪಿ ಕಾಂಗ್ರೆಸ್ ಪಕ್ಷದಿಂದ ಸ್ವತಂತ್ರ ನಡಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಪಕ್ಷಾತೀತವಾಗಿ ಭಾಗಿಯಾಗಲು ಕರೆ ನೀಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *