ಇಂದು ಭಾಗಶಃ ರಾಜ್ಯದ ಎಲ್ಲಾ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ ಭಾಗಗಳಲ್ಲಿ ಮಳೆ ಮುಂದುವರಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಗೆ ಜನರು ಹೈರಾಣು ಆಗಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿಯೂ ಮೋಡ ಮತ್ತು ಸೂರ್ಯನ ಆಟ ನಡೆಯಲಿದ್ದು, ಭಾಗಶಃ ಒಣ ಹವೆ ಇರಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಕೊಡಗು, ಶಿವಮೊಗ್ಗ, ಹಾಸನ, ಉಡುಪಿ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. . ಮಹಾರಾಷ್ಟ್ರ ಭಾಗದಲ್ಲಿ ಮಳೆ ಹೆಚ್ಚಾಗುತ್ತಿರುವ ಕಾರಣ ಕೃಷ್ಣೆ ಮತ್ತು ಭೀಮೆಯ ಅಬ್ಬರ ಹೆಚ್ಚಾಗುತ್ತಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆ ಜಲಾಶಯಗಳಿಂದ ಹೆಚ್ಚು ನೀರು ಬಿಡಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





