Breaking News

ಸ್ಪಾರ್ಕರ್ ತಯಾರಿಕೆ ಘಟಕದಲ್ಲಿ ಬೆಂಕಿ: ಅಗ್ನಿ ಕಿನ್ನಾಲಿಗೆಗೆ ಬೆಚ್ಚಿದ ಜನರು

ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಸ್ಪಾರ್ಕ್ಸ್ ಹಚ್ಚುವ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಾಲ್ಕು ಜನರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸಿನಲ್ಲಿ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಆಗಮಿಸಿದ್ದು, ರಕ್ಷಣೆಗೆ ಮುಂದಾಗಿದ್ದಾರೆ.

ಇನ್ನೂ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗಷ್ಟೇ ಆರಂಭವಾಗಿದ್ದ ತಯಾರಿಕಾ ಘಟಕದಲ್ಲಿ ಇಂತಹದೊಂದು ಅವಘಡ ಸಂಭವಿಸಿದ್ದು, ಅವಘಡದ ಬಗ್ಗೆ ಕೂಲಂಕಷವಾದ ಮಾಹಿತಿ ಲಭ್ಯವಾಗಬೇಕಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *