Breaking News

ವಯಸ್ಸಿನ ಲೆಕ್ಕಾಚಾರದಲ್ಲಿಯೂ ನನಗೆ ಟಿಕೆಟ್ ನೀಡಲ್ಲ : ಬಸವರಾಜ್


ತುಮಕೂರು: ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ.

ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಬಸವರಾಜ್ ಹೇಳಿದ್ದಾರೆ.

Share News

About BigTv News

Check Also

ನಕಲಿ ದಾಖಲೆ ಮೂಲಕ ನಿವೇಶನ ಕಬಳಿಕೆ ; ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. …

Leave a Reply

Your email address will not be published. Required fields are marked *