Breaking News

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ- ಚಿಕಿತ್ಸೆ ಫಲಿಸದೇ ಓರ್ವ ಮಹಿಳೆ ಸಾವು

ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಭಾನುವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ (45l ಮೃತರು. ಇವರಿಗೆ ಶೇ. 90ರಷ್ಟು ಸುಟ್ಟಗಾಯಗಳಾಗಿದ್ದವು. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಏಳು ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ತಾರಿಹಾಳ ಕೈಗಾರಿಕಾ ಪ್ರದೇಶದ ಮೊದಲ ಅಡ್ಡರಸ್ತೆಯಲ್ಲಿರುವ ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಉಂಟಾಗಿತ್ತು. ದುರ್ಘಟನೆಯಲ್ಲಿ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.ಈ ಕಾರ್ಖಾನೆ ಕೇವಲ 15 ದಿನದ ಹಿಂದಷ್ಟೆ ಆರಂಭವಾಗಿದ್ದು, ಅನಧಿಕೃತವಾಗಿದೆ ಎನ್ನಲಾಗಿದೆ. ಘಟನೆಯ ಬಳಿಕ ಮಾಲೀಕ ತಬ್ಸುಮ್ ಶೇಕ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *