ನವದೆಹಲಿ: ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ.
“ಫಲಿತಾಂಶ ಪ್ರಕಟವಾದ ನಂತರ ನಾನು ಈ ಬಗ್ಗೆ ಯೋಚಿಸಿದೆ. ಯಾವುದೇ ರಾಜಕೀಯ ಪಕ್ಷವನ್ನು ಸೇರದಿರಲು ನಿರ್ಧರಿಸಿದೆ.ರಾಜಕೀಯ ಪಕ್ಷವನ್ನು ಸೇರದೆ ಜನರೊಂದಿಗೆ ಇರುತ್ತೇನೆ” ಎಂದು ಹೇಳಿದರು. ಯಶವಂತ್ ಸಿನ್ಹಾ ಅವರು ತಾವು ಸ್ಥಾಪಿಸಿದ ರಾಷ್ಟ್ರೀಯ ಮಂಚ್‌ನಲ್ಲಿ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಸೂಚಿಸಿದ್ದಾರೆ.
ಯಶವಂತ್ ಸಿನ್ಹಾ ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ತೃಣಮೂಲಕ್ಕೆ ಸೇರಿದ್ದರು. ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಅವರು ನೇಮಕವಾಗಿದ್ದರು.ಇತ್ತೀಚಿಗೆ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಅವರು ಟಿಎಂಸಿಗೆ ವಿದಾಯ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





