Breaking News

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ


ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಒಣ ಹವೆ ಇರಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು  ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯ ಸಿಂಚನ ಆಗಲಿದೆ.

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಪ್ರಖರವಾಗಲಿದೆ. ಮಳೆ ಪ್ರಮಾಣ ಕಡಿಮೆಯಾದರೂ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣೆಗೆ ನೀರು ಹರಿದು ಬರುತ್ತಿದೆ. ಆದ್ದರಿಂದ ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *