ಬೆಂಗಳೂರು: ರಾಜಧಾನಿಯಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಸಿಬಿಯ 30 ಅಧಿಕಾರಿಗಳ ತಂಡ ತಿಲಕ್ ನಗರದ ಮನೆ ಮೇಲೆ ದಾಳಿ ಮಾಡಿದೆ.
ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗನ ಮನೆಯಲ್ಲಿಯೇ ತಂಗಿದ್ದ ಉಗ್ರನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆರೋಪಿಯ ಹಿನ್ನೆಲೆ, ಆತ ಯಾಕೆ ಬೆಂಗಳೂರಿಗೆ ಬಂದಿದ್ದ ಎಂಬುದರ ಬಗ್ಗೆ ಸಿಸಿಬಿ ತನಿಖೆಯಲ್ಲಿ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





