ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ.
ದೇಶದಲ್ಲಿ 16,866 ಹೊಸ ಪ್ರಕರಣಗಳು ಪತ್ತೆಯಾಗಿವೆ. 41ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ.
ಸಕ್ರಿಯ ಪ್ರಕರಣಗಳು 150877 ಇದ್ದು ಪಾಸಿಟಿವಿಟಿ ದರ ಶೇ.7.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 16,82,390ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,17,66,615 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 526074ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18148ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43228670ಕ್ಕೆ ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





