Breaking News

ಮಾಜಿ ಸಿಎಂ ಅವರ ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ : ಎಚ್‌.ವಿಶ್ವನಾಥ್‌


ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್‌ ಉತ್ಸವ ನಡೆಯಬೇಕಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು.

ತಮ್ಮ ಹುಟ್ಟುಹಬ್ಬಕ್ಕೆ ಸ್ನೇಹಿತರೊಬ್ಬರು ಉಡುಗೊರೆಯಾಗಿ ನೀಡಿದ್ದ ಆಯಂಬುಲೆನ್ಸ್‌ ಅನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಕಲಾಮಂದಿರದಲ್ಲಿ ಸಿದ್ದರಾಮಯ್ಯ ಸಾಧನೆ ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್‌ ಬಗ್ಗೆ ಮಾತನಾಡಲಿಲ್ಲ. ಸ್ವತಃ ಸಿದ್ದರಾಮಯ್ಯ ಕೂಡ ಕಾಂಗ್ರೆಸ್‌ ಹೆಸರೇಳಲಿಲ್ಲ. ಬರೀ ಸಿದ್ದರಾಮಯ್ಯನವರ ಬಗ್ಗೆಯೇ ಪುಂಗಿ ಊದಿದರೇ, ಕಾಂಗ್ರೆಸ್‌ ಕುರಿತು ಪುಂಗಿ ಊದುವವರು ಯಾರು ಎಂದು ಪ್ರಶ್ನಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *