Breaking News

ರಾಜ್ಯದಲ್ಲಿ ಬಿಜೆಪಿ ಹಿಂದೂ-ಮುಸ್ಲಿಮರ ಭಾವೈಕ್ಯಕ್ಕೆ ಧಕ್ಕೆ ತರುತ್ತಿದೆ : ಜಮೀರ ಅಹಮದ್‌ ಖಾನ್


ಹಾವೇರಿ: ‘ರಾಜ್ಯದಲ್ಲಿ ಬಿಜೆಪಿ ಹಿಂದೂ-ಮುಸ್ಲಿಮರ ಮಧ್ಯೆ ವಿಷಬೀಜ ಬಿತ್ತಿ ಭಾವೈಕ್ಯಕ್ಕೆ ಧಕ್ಕೆ ತರುತ್ತಿದೆ. ಬ್ರಿಟಿಷರ ಒಡೆದಾಳುವ ನೀತಿಯನ್ನೇ ಆರ್‌ಎಸ್‌ಎಸ್‌ ಜೊತೆಗೆ ಸೇರಿ ಬಿಜೆಪಿ ಮಾಡುತ್ತಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಕೊಡುಗೆಯಿದೆ’ ಎಂದು ಶಾಸಕ ಜಮೀರ ಅಹಮದ್‌ ಖಾನ್ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವ ಆಚರಣೆ ಪೂರ್ವಭಾವಿಯಾಗಿ ನಗರದ ಶಿವಶಕ್ತಿ ಪ್ಯಾಲೇಸ್‍ನಲ್ಲಿ ಸೋಮವಾರ ಆಯೋಜಿಸಿದ್ದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ನಾವೂ ಹಿಂದೂಸ್ತಾನಿಗಳೇ. ಈ ಕಾರಣಕ್ಕೇ ‘ಸಾರೇ ಜಹಾಂಸೆ ಅಚ್ಛಾ ಹಿಂದೂಸ್ತಾನ್ ಹಮಾರಾ’ ಎನ್ನುವ ಮೂಲ ಮಂತ್ರವನ್ನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *