Breaking News

ಮಡಿಲಲ್ಲಿದ್ದ ಮಗುವಿಗೆ ಹಾಲುಣಿಸುತ್ತಲೆ ಪ್ರಾಣ ಬಿಟ್ಟ ತಾಯಿ


ನಾಗರಕರ್ನೂಲ್ : ಹೃದಯವಿದ್ರಾವಕ ಘಟನೆಯೊಂದರಲ್ಲಿ ಮಡಿಲಲ್ಲಿದ್ದ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮಾಜಿಪೇಟ್ ಮಂಡಲದ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.

ಕುಟುಂಬಸ್ಥರ ಪ್ರಕಾರ 25 ವರ್ಷದ ಜಯಶ್ರೀ ತನ್ನ ಮೊದಲ ಹೆರಿಗೆಗೆ ತನ್ನ ತಾಯಿಯ ಮನೆಗೆ ಬಂದಿದ್ದರು. 2 ತಿಂಗಳ ಕೆಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆಕೆಯ ಪತಿ ಪ್ರಶಾಂತ್ ಶನಿವಾರ ತಿರ್ಮಲಾಪುರದಿಂದ ಬಂದು ಆಕೆಯ ಮೈಬಣ್ಣ ಬದಲಾಗಿ ಕಪ್ಪಾಗಿದ್ದರಿಂದ ಮಹಬೂಬನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಹೃದಯ ಕವಾಟದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದು, ಔಷಧ ಬಳಸಿದರೆ ಗುಣವಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ವೈದ್ಯರು ಬರೆದುಕೊಟ್ಟ ಔಷಧಗಳನ್ನು ಸೇವಿಸಿ ಮತ್ತೆ ನೇರಳಪಲ್ಲಿಗೆ ಮರಳಿದ್ದರು.

ಭಾನುವಾರ ಬೆಳಗ್ಗೆ 5.30ಕ್ಕೆ ಮಗುವಿಗೆ ಹಾಲುಣಿಸುವ ವೇಳೆ ಜಯಶ್ರೀ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ಸಮಯದ ನಂತರ ಅಜ್ಜ ಮತ್ತು ಅಜ್ಜಿ ಚಹಾಕ್ಕೆ ಕರೆದರು. ಆದರೆ ಅವರ ಕೋಣೆಯಿಂದ ಉತ್ತರ ಬರಲಿಲ್ಲ. ಅವರು ಏನಾಯಿತು ಎಂದು ನೋಡಲು ಹೋದಾಗ ಸಾವನ್ನಪ್ಪಿರುವುದು ತಿಳಿದು ಬಂದಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *