Breaking News

ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಕೊಡುಗೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ವಿವಿಧ ಸಹಾಯಧನ ಯೋಜನೆ ಸೇರಿದಂತೆ ಮಹತ್ವದ ಕೊಡುಗೆಗಳನ್ನು ನೀಡುತ್ತಿರೋದಾಗಿ ತಿಳಿಸಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಅವರು, ಕಾರ್ಮಿಕರಿಗೆ ಹೆರಿಗೆ ಸಹಾಯಧನವನ್ನು ಗಂಡು-ಹೆಣ್ಣು ಎನ್ನುವ ಭೇದ-ಭಾವ ಇಲ್ಲದೇ 50 ಸಾವಿರ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ. ಅಂತಿಮ ಸಂಸ್ಕಾರ ವೆಚ್ಚ ಸಹಾಯಧನ ಮೊತ್ತವನ್ನು ರೂ.50 ಸಾವಿರದಿಂದ 71 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ವೈದ್ಯಕೀಯ ಸಹಾಯಧನ ರೂ.10 ಸಾವಿರದಿಂದ 20 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *